Mungaru bele vime Kharif Crop Insurance 2024 : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಹೆಸರು ನೋಂದಾಯಿಸುವ ಮೂಲಕ ರೈತರು ವಿಮೆ ಮಾಡಿಸಿಕೊಳ್ಳಬೇಕು ಎಂದು ವಿವಿಧ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿಕೊಂಡಿದ್ದಾರೆ.
ಪ್ರಸಕ್ತ ಸಾಲಿನ ಮುಂಗಾರು ಬೆಳೆಗಳ ವಿಮೆ (Monsoon Crop Insurance) ಮಾಡಿಸಲು ಬ್ಯಾಂಕ್, ಸಹಕಾರ ಸಂಘಗಳಲ್ಲಿ ಬೆಳೆ ಸಾಲ ಪಡೆದ ರೈತರಿಗೆ ಸಾಲ ಮಂಜೂರಾತಿ ವೇಳೆಯಲ್ಲಿಯೇ ವಿಮೆ ಕಂತನ್ನು ಕಡಿತ ಮಾಡಿಕೊಂಡೇ ಸಾಲದ ಮೊತ್ತ ನೀಡಲಾಗಿರುತ್ತದೆ. ಹೀಗಾಗಿ ಈ ರೈತರು ಬೆಳೆವಿಮೆ ಕಂತನ್ನು ಪ್ರತ್ಯೇಕವಾಗಿ ಪಾವತಿಸುವ ಅಗತ್ಯವಿಲ್ಲ.
ಆದರೆ, ಬೆಳೆ ಸಾಲ ಪಡೆದ ರೈತರಿಗೆ ಈ ವರ್ಷ ಬೆಳೆ ವಿಮೆ ಬೇಡ ಅನ್ನಿಸಿದಲ್ಲಿ ತಮ್ಮ ವ್ಯಾಪ್ತಿಯ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿAತ ಏಳು ದಿನಗಳ ಮುಂಚಿತವಾಗಿ ಲಿಖಿತವಾಗಿ ಮುಚ್ಛಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುತ್ತದೆ.
Blue Aadhar Card : ನೀಲಿ ಆಧಾರ್ ಕಾರ್ಡ್ ಮಾಡಿಸುವುದು ಹೇಗೆ? ಇದರಿಂದ ಪ್ರಯೋಜನವೇನು?
ಇನ್ನು ಬೆಳೆ ಸಾಲ ಪಡೆಯದೇ ಇರುವ ರೈತರು ಬೆಳೆ ವಿಮೆ ಮಾಡಿಸಲು ಹತ್ತಿರದ ಬ್ಯಾಂಕ್, ಗ್ರಾಮ ಒನ್ ಕೇಂದ್ರ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಸಂಪರ್ಕಿಸಿ, ಜಮೀನು ಪಹಣಿ, ಬ್ಯಾಂಕ್ ಪಾಸ್‌ಬುಕ್, ಆಧಾರ್ ಕಾರ್ಡ್ ಮತ್ತು ವಿಮಾ ಅರ್ಜಿಯೊಂದಿಗೆ ಯಾವ ಬೆಳೆಗೆ ವಿಮೆ ಮಾಡಿಸುತ್ತಿದ್ದೀರೋ ಆ ಬೆಳೆ ವಿಮೆಯ ಕಂತನ್ನು (ಪ್ರೀಮಿಯಂ) ಪಾವತಿಸಬೇಕು.
ಬೆಳೆಯನ್ನು ಆಧರಿಸಿ ಪ್ರೀಮಿಯಂ ಕಂತು (Premium Installment) ನಿಗದಿಯಾಗುತ್ತದೆ ಮತ್ತು ಇದನ್ನು ಬೀಜ ಬಿತ್ತನೆಗೂ ಮೊದಲೇ ಮಾಡಬೇಕು. ಬಳಿಕ ಯಾವುದೇ ನೈಸರ್ಗಿಕ ವಿಕೋಪಗಳಿಂದಾಗಲೀ ಅಥವಾ ತಮ್ಮ ಕೈ ಮೀರಿದ ಯಾವುದೇ ನೈಸರ್ಗಿಕ ಅವಘಡಗಳಿಂದಾಗಲೀ ಬೆಳೆ ಹಾನಿ ಸಂಭವಿಸಿದರೆ ರೈತರು ವಿಮೆ ಮಾಡಿದ ಮೊತ್ತವನ್ನು (Some assured) ಇನ್ಶೂರೆನ್ಸ್ ಕಂಪನಿಯಿ೦ದ ಪಡೆಯುತ್ತಾರೆ.
ಯಾವೆಲ್ಲ ಬೆಳೆಗಳಿಗೆ ವಿಮೆ ನೋಂದಣಿ?
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ಹೋಬಳಿ ಮಟ್ಟದ ಬೆಳೆಗಳಾದ ಜೋಳ, ರಾಗಿ, ಸಜ್ಜೆ, ನವಣೆ, ತೊಗರಿ, ಹುರುಳಿ, ಸೂರ್ಯಕಾಂತಿ, ಎಳ್ಳು, ಹತ್ತಿ, ನೆಲಗಡಲೆ, ಈರುಳ್ಳಿ, ಭತ್ತ, ಕೆಂಪು ಮೆಣಸಿನಕಾಯಿ ಬೆಳೆಗಳಿಗೆ ವಿಮೆಯನ್ನು ಮಾಡಿಸಿಕೊಳ್ಳಬೇಕು.
ಬೆಳೆ ವಿಮೆಯನ್ನು ಮಾಡಿಸಲು ವಿವಿಧ ಬೆಳೆಗಳಿಗೆ ಕೊನೆಯ ದಿನಾಂಕ ಕೂಡ ನಿಗದಿಯಾಗಿದೆ. ಈ ಪೈಕಿ ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನಕಾಯಿ, ಈರುಳ್ಳಿ ಮತ್ತು ಎಳ್ಳು ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ.
Aadhaar Card Update : ಆಧಾರ್ ಅಪ್ಡೇಟ್ | ನಿಮ್ಮ ಮೊಬೈಲ್‌ನಲ್ಲೇ ಅಪ್ಡೇಟ್ ಮಾಡಿಕೊಳ್ಳುವ ಸರಳ ವಿಧಾನ ಇಲ್ಲಿದೆ…
ಅದೇ ರೀತಿ ಭತ್ತ, ತೊಗರಿ, ರಾಗಿ, ನವಣೆ, ಹುರುಳಿ, ನೆಲಗಡಲೆ ಮತ್ತು ಸಜ್ಜೆ ಬೆಳೆಗಳಿಗೆ ವಿಮೆ ಮಾಡಿಸಲು ಆಗಸ್ಟ್ 16 ಕೊನೆಯ ದಿನ ಮತ್ತು ಎಳ್ಳು ಬೆಳೆಗೆ ವಿಮೆ ಮಾಡಲು ಜುಲೈ 15 ಕೊನೆಯ ದಿನವಾಗಿದೆ.
ರೈತರು ತಮ್ಮ ಜಿಲ್ಲೆ ಮತ್ತು ಬೆಳೆಗಳ ಕೊನೆಯ ದಿನಾಂಕಗಳ ಪಟ್ಟಿಯನ್ನು ಸರಕಾರದ ‘ಸಂರಕ್ಷಣೆ’ (SAMRAKSHANE-KARNATAKA) ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ನೋಡಿಕೊಂಡು ಬೆಳೆ ವಿಮಾ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಜಿಲ್ಲೆ ಮತ್ತು ಬೆಳೆವಾರು ಕೊನೆಯ ದಿನಾಂಕಗಳ ಪಟ್ಟಿಯನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
ರೈತರು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದಾಗಿದೆ. ಜೊತೆಗೆ ತಮ್ಮ ಜಿಲ್ಲೆಯ ಬೆಳೆ ವಿಮಾ ಕಂಪನಿಯ ಸಿಬ್ಬಂದಿ ಮೊಬೈಲ್ ನಂಬರ್ ಬೇಕಾದರೆ 1800180 1551 ಉಚಿತ ಸಹಾವಾಣಿ ನಂಬರಿಗೆ ಕರೆ ಮಾಡಬಹುದು.
ಹೋದ ವರ್ಷ ಕರ್ನಾಟಕ ಸರಕಾರ ನಮ್ಮ ರಾಯಚೂರ ಜೆಲ್ಲೆ ಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿತ್ತು. ನಾವೂ ಸಹಿತ ಫಸಲ್ತೊ ಭೀಮಾ ಯೋಜನೆ ಬೆಳೆ ವಿಮೆ ನಮ್ಮ ಕoತನ್ನು ಕಟ್ಟಿದ್ದೇವೆ. ತೊಗರೆ ಬಿತ್ತಿ ಹಾನಿಗೋಳಗಾಗಿದ್ದು ಈ ಫಸಲ್ ಭೀಮಾ ಯೋಜನೆಯಿಂದ ಹೋದ ವರ್ಷದ ಮುಂಗಾರು ವಿಮ ಹಣ ಇನ್ನೂ ಬಂದಿಲ್ಲ. ಬರೋದೂ ಇಲ್ಲ. ಪುನಃ ರಾತ್ರಿ ಕಂಡ ಬಾವಿಯಲ್ಲಿ ಹಗಲು ಕೆಡುವಬೇಡಿ.ಈ ಯೋಜನೆಗೊಂದು ದೊಡ್ಡ ನಮಸ್ಕಾರ